ಡಿನೋಟಿಫಿಕೇಷನ್‌: ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಗೆ ಮನವಿ

ಬುಧವಾರ, 20 ಡಿಸೆಂಬರ್ 2017 (15:50 IST)
ಭೂಪಸಂದ್ರ ಅಕ್ರಮ ಭೂ ಡಿನೋಟಿಫಿಕೇಷನ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
 
ಹಿಂದುಳಿದ ವರ್ಗ ಘಟಕದ ರಾಜ್ಯಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜಭವನಕ್ಕೆ ಭೇಟಿ, ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ‌ ನೀಡುವಂತೆ ಕೋರಿದೆ.
 
ಭೂಪಸಂದ್ರ ಭೂ ಡಿನೋಟಿಫಿಕೇಷನ್‌‌ನಲ್ಲಿ ಅಕ್ರಮ ನಡೆದಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ