ಡಿನೋಟಿಫಿಕೇಶನ್ ಪ್ರಕರಣ: ಹೆಚ್‌ಡಿಕೆಗೆ ಜಾಮೀನು

ಗುರುವಾರ, 28 ಮೇ 2015 (15:25 IST)
ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನಗರದ ಲೋಕಾಯುಕ್ತ ವಿಷೇಷ ಕೋರ್ಟ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.
 
ಹೌದು, ಕುಮಾರಸ್ವಾಮಿ ಅವರ ಅತ್ತೆ ವಿಮಲಾ ಅವರ ಹೆಸರಿಗೆ ನಗರದ ಏರ್‌ಪೋರ್ಟ್ ರಸ್ತೆ ಬಳಿ ಇರುವ ಗಂಗೇನಹಳ್ಳಿಯಲ್ಲಿನ  1.11 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಜಯಕುಮಾರ್ ಹಿರೇಮಠ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್‌ಡಿಕೆ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದರಿಂದ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮಟ್ಟಿನ ವಿಶ್ರಾಂತಿ ಸಿಕ್ಕಂತಾಗಿದೆ. 
 
ಇನ್ನು ಈ ಪ್ರಕರಣ 2010ರಲ್ಲಿ ನಡೆದಿದ್ದು, ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಮಲ ಅವರಿಗೆ ಡಿನೋಟಿಫಿಕೇಶನ್ ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆಹಾಕಿದ್ದ ಹಿರೇಮಠ್, ದೂರು ದಾಖಲಿಸಿದ್ದರು. 

ವೆಬ್ದುನಿಯಾವನ್ನು ಓದಿ