2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಸ್ತಾಂತರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲೂ ಭರ್ಜರಿ ತಯಾರಿಗಳನ್ನು ನಡೆಸಲಾಗುತ್ತಿದೆ. ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಹತ್ವದ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಬೆಂಗಳೂರು ನಗರದ ಪ್ರತಿಯೊಂದು ಮನೆಗಳಲ್ಲಿ ರಾಷ್ಟ್ರಧ್ವಜ ರಾರಾಜಿಸುವಂತೆ ಮಾಡಲು ಇಲಾಖೆಯಿಂದ ಬೆಂಗಳೂರು ಮಹಾನಗರ ಪಾಲಿಕೆ ಗೆ 2 ಲಕ್ಷ ಧ್ವಜಗಳನ್ನು ಹಸ್ತಾಂತರಿಸಲಾಗುತ್ತಿದೆ. ಈ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 8ರಿಂದ ಆ.17ರ ವರೆಗೆ ಕೇಂದ್ರ ಸರ್ಕಾರ ಸೂಚಿಸಿದಂತೆ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಉನ್ನತ ಮಟ್ಟದ ಸಮಿತಿ ತಿರಂಗ ಅಭಿಯಾನವನ್ನು ಆರಂಭಿಸಲಿದೆ. ಇದರ ಭಾಗವಾಗಿ 2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲಾಗುತ್ತಿದ್ದು, ಅಧಿಕಾರಿಗಳು ಪ್ರತಿ ಮನೆಗಳಿಗೂ ಧ್ವಜಗಳನ್ನು ವಿತರಣೆ ಮಾಡಲಿದ್ದಾರೆ.