ದಸರಾ ರಜೆ ಹಿನ್ನಲೆ 2000 ಹೆಚ್ಚುವರಿ ಬಸ್ ಗಳು ರಸ್ತೆಗಳಿಗೆಸಲು ಸಾರಿಗೆ ಇಲಾಖೆ ಸಜ್ಜು

ಶನಿವಾರ, 21 ಅಕ್ಟೋಬರ್ 2023 (14:53 IST)
ಮೈಸೂರು ದಸರಾ ಹಿನ್ನೆಲೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಬಿಡುಗಡೆಯಾಗಿದೆ.ರಾಜ್ಯ ಹಾಗೂ ನೆರೆ ರಾಜ್ಯಗಳಿಗೂ KSRTC ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.ವಿವಿಧೆಡೆ ಪ್ರಯಾಣಿಸುವವರಿಗೆ 2000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಕಲ್ಪಿಸಲಾಗಿದೆ.
 
ರಾಜಹಂಸ, ಸೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಅ.20ರಿಂದ 26ವರೆಗೆ ಬೆಂಗಳೂರಿನಿಂದ `ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಗೆ 2000ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆಯಾಗಿದೆ.ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್ ಗಳು ಸಮನಚರಿಸಲಿದೆ.ಅದೇ ರೀತಿ ಅ. 24ರಿಂದ 29ರವರೆಗೆ ರಾಜ್ಯದ ಮತ್ತು ನೆರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳ ಸಂಚಾರ ನಡೆಸಲಿದೆ.ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಸೇರಿದಂತೆ ಹಲವೆಡೆ ಬಸ್ ವ್ಯವಸ್ಥೆ ಮಾಡಲಾಗಿದೆ.
 
 ಮೈಸೂರಿಗೆ 600 ವಿಶೇಷ ಬಸ್‌ ಗಳ ವ್ತವಸ್ಥೆ ಮಾಡಲಾಗಿದೆ.ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು,ಮೈಸೂರು ನಗರದ ಸುತ್ತಮುತ್ತಲಿನ ಪ್ರವಾಸಿ ತಾಣಗಳ ವೀಕ್ಷಣೆಗೂ 350 ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆಯನ್ನ ಮುಂಗಡವಾಗಿ 5% ರಿಯಾಯಿತಿ  ksrtc ನೀಡಿದೆ.4 ಜನ ಪ್ರಯಾಣಿಕರು ಒಟ್ಟಿಗೆ ಟಿಕೇಟ್ ಬುಕಿಂಗ್ ಮಾಡಿದರೆ 5 % ರಿಯಾಯಿತಿ ನೀಡಲಾಗಿದೆ. ಹೀಗಾಗಿ
ದಸರಾ ಲಾಭಡೆಯಲು ಸಾರಿಗೆ ಇಲಾಖೆ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ