ದ್ವೇಷದ ಭಾಷಣ ಮಾಡೋರನ್ನು ಗಡಿಪಾರು ಮಾಡಿ : ಖಾದರ್
ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ.