ಉತ್ತರ ಕನ್ನಡ ಜಿಲ್ಲಾಧಿಕಾರಿ ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.
ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.
ಕಾರವಾರ ನಗರದ ಅಲಿಗದ್ದಾದಲ್ಲಿರುವ ವಾರ್ಡ್ ಸಂಖ್ಯೆ 2 ರ ಅಂಗನವಾಡಿ ಕೇಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 3 ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತ ರೀತಿಯಿಂದ ಮತದಾನ ನಡೆಯುತ್ತಿದೆ. ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಶಿರಸಿಯಲ್ಲಿ ಮತಯಂತ್ರದ ಸಮಸ್ಯೆ ಎದುರಾಗಿತ್ತು . ಕೂಡಲೇ ಇಂಜಿನೀಯರಗಳನ್ನು ಕಳುಹಿಸಿ ಸರಿಪಡಿಸಲಾಯಿತು. ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಉತ್ತಮ ರೀತಿಯಲ್ಲಿ ನಡೆಯುತ್ತಲಿದೆ ಎಂದರು.