ಅವಹೇಳನಕಾರಿ ಜಾಹೀರಾತು: ಕಾಂಗ್ರೆಸ್, ಡಿಕೆಶಿ ವಿರುದ್ಧ ಬಿಜೆಪಿ ದೂರು

Sampriya

ಶುಕ್ರವಾರ, 19 ಏಪ್ರಿಲ್ 2024 (17:40 IST)
ಬೆಂಗಳೂರು: ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ದೂರು ನೀಡಿದೆ.

ಕಾಂಗ್ರೆಸ್ ಪಕ್ಷ ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿದೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಇದೀಗ ಚುನಾವನಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಪತ್ರಿಕೆಗಳಲ್ಲಿ ಮಾನಹಾನಿ ಮಾಡುವ ಜಾಹೀರಾತನ್ನು ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ತಕ್ಷಣವೇ ಎಫ್‍ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕೂಡಲೇ ಸೂಕ್ತ ನಿರ್ದೇಶನ ಕೊಡುವಂತೆ ಮನವಿ ಆಗ್ರಹಿಸಿದೆ.

ಮನವಿ ಸಲ್ಲಿಸುವ ನಿಯೋಗದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪಕ್ಷದ ಪ್ರಮುಖ ನಾಯಕರು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ