ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್ಐಆರ್
ಪ್ರಕರಣ ಸಂಬಂಧ ರವಿಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, "ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ" ಎಂದಿದ್ದರು.