ಆಸೆ ತಪ್ಪಲ್ಲ, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ: ಡಿಕೆ ಶಿವಕುಮಾರ್

Sampriya

ಸೋಮವಾರ, 2 ಸೆಪ್ಟಂಬರ್ 2024 (18:31 IST)
ಬೆಂಗಳೂರು: ಹಿರಿಯರಾದ ಆರ್‌.ವಿ.ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ, ಆದರೆ ಅದನ್ನು ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ 'ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ ಎಂದರು.

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ ಎಂದು ಕೌಂಟರ್ ಕೊಟ್ಟರು.

ಕೋವಿಡ್ ಹಗರಣದ ಬಗ್ಗೆ ನಾನು ಹೆಚ್ಚೇನು ಓದಿಲ್ಲ. ಮಾಧ್ಯಮಗಳಲ್ಲಿ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ