ರಾಜ್ಯದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ನಲ್ಲಿ ಜೀವಂತ ಬಾಂಬ್ ಪತ್ತೆಯಾಗಿರೋದ್ರಿಂದ ಕೆಲವೆಡೆ ಕಟ್ಟು ನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ.
ಮಂಗಳೂರು, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಅನುಮಾನಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು ಇಡಲಾಗುತ್ತಿದೆ.
ಅಷ್ಟೇ ಅಲ್ಲ, ಮಂಗಳೂರಿನಲ್ಲಿ ಪತ್ತೆಯಾದ ಬಾಂಬ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.