ತಿರುಪತಿಯಲ್ಲಿ ದೇವೇಗೌಡರ ಹುಟ್ಟುಹಬ್ಬ

ಬುಧವಾರ, 17 ಮೇ 2017 (09:01 IST)
ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇಂದು ತಿರುಪತಿಗೆ ತೆರಳಿದ್ದಾರೆ. ಕಾರಣ, ನಾಳೆ ದೇವೇಗೌಡರಿಗೆ ಹುಟ್ಟುಹಬ್ಬದ ಸಂದರ್ಭ.

 
ಮಾಜಿ ಪ್ರಧಾನಿ ದೇವೇಗೌಡರಿಗೆ ನಾಳೆ 85 ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ದೇವೇಗೌಡರು ಪತ್ನಿ ಚೆನ್ನಮ್ಮ ಸಮೇತ ಇಂದು ಬೆಳಿಗ್ಗೆ ತಿರುಪತಿಗೆ ತೆರಳುತ್ತಿದ್ದಾರೆ.

ನಾಳೆ ತಿಮ್ಮಪ್ಪನ ದರ್ಶನ ಮುಗಿಸಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ದೊಡ್ಡ ಗೌಡರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಜೆಡಿಎಸ್ ನಲ್ಲೂ ಸಂಭ್ರಮ ಮನೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ