ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದ ದೋಸ್ತಿ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ಹೆಚ್.ಡಿ. ದೇವೇಗೌಡರು ಇದೀಗ ಕಾಂಗ್ರೆಸ್ ನಾಯಕರ ನಡೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ದೇವೇಗೌಡರು ಸ್ಪರ್ಧಿಸಲಿರುವ ತುಮಕೂರಿನಲ್ಲಿ ಮುದ್ದಹನುಮೇಗೌಡ ಅಭಿಮಾನಿಗಳ ಒತ್ತಾಯದ ಮೇರೆಗೆ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋಪಗೊಂಡ ದೇವೇಗೌಡರು, ತುಮಕೂರಿನಲ್ಲಿ ಬಂಡಾಯ ಶಮನವನ್ನು ಕೂಡಲೇ ಸರಿಪಡಿಸದಿದ್ದರೆ, ಪರಿಸ್ಥಿತಿ ಸರಿಯಿರಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೇ ಮತ್ತೊಂದು ಕಡೆ ಕೆ.ಎನ್.ರಾಜಣ್ಣ ಮೈತ್ರಿ ಧರ್ಮ ಮರೆತು ದೇವೇಗೌಡರ ವಿರುದ್ಧ ಮಾತನಾಡುತ್ತಿದ್ದಾರೆ. ಇಷ್ಟೆಲ್ಲಾ ಆಗುತ್ತಿದ್ದರೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಯಾವ ನಾಯಕರೂ ಗಮನ ಹರಿಸುತ್ತಿಲ್ಲ. ಆರಂಭದಲ್ಲೇ ಸಮಸ್ಯೆ ಬಗೆಹರಿಸಿದರೆ ಒಳ್ಳೆಯದು, ಇಲ್ಲದೇ ಇದ್ದಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ಗರಂ ಆಗಿ ಹೇಳಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.