ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ಸಹೋದರರದ್ದು '420 ಕುಟುಂಬ' ಎಂದಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಸುರೇಶ್ ಪ್ರತಿಕ್ರಿಯಿಸಿ, ದೇವೇಗೌಡರ ಕುಟುಂಬದ ಆಸ್ತಿ ಪೆನ್ಡ್ರೈವ್, ಇನ್ಮುಂದೆ ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.
ನಾನು ಅವರ ಕುಟುಂಬವನ್ನು 420 ಎಂದು ಕರೆಯುವುದಿಲ್ಲ ಎಂದ ಅವರು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುಟುಂಬದ ಆಸ್ತಿ ಪೆನ್ಡ್ರೈವ್ ಆಗಿದೆ. ಇನ್ನು ತೆನೆ ಹೊತ್ತ ಮಹಿಳೆ ಪೆನ್ಡ್ರೈವ್ ಹೊರಬೇಕಾಗುತ್ತದೆ. ಇದು ಪೆನ್ಡ್ರೈವ್ ಕುಟುಂಬ ಎಂದು ಡಿಕೆ ಸುರೇಶ್ ಲೇವಡಿ ಮಾಡಿದರು.
ಜೆಡಿಎಸ್ನ ಮೈತ್ರಿ ಪಾರ್ಟರ್ನರ್ ಪೆನ್ಡ್ರೈವ್ ಬಿಡುಗಡೆ ಮಾಡಿದ್ದು, ಎಚ್ಡಿ ಕುಮಾರಸ್ವಾಮಿ ಅವರಿಗೆ ಅವರನ್ನು ಪ್ರಶ್ನೆ ಮಾಡುವ ಧೈರ್ಯವಿಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಸುರೇಶ್ ಕಿಡಿ ಕಾರಿದರು.