ಸಮ್ಮಿಶ್ರ ಸರ್ಕಾರ ಉಳಿಸಲು ಮನೆಯಲ್ಲೇ ಕೂತು ದೇವೇಗೌಡರ ತಂತ್ರ
ಕಾಂಗ್ರೆಸ್ ನ ಬಂಡಾಯ ಶಾಸಕರ ನಡೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ದೇವೇಗೌಡರು ಸರ್ಕಾರ ಉಳಿಸಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.
ಈ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ತಮ್ಮ ಕಾವೇರಿ ನಿವಾಸದಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ. ಅತ್ತ ಬಿಜೆಪಿ ಸರ್ಕಾರದ ನಡೆ ನೋಡಿಕೊಂಡು ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಸಿದೆ.