ಚಾಮುಂಡೇಶ್ವರಿಯಲ್ಲೇ ಸಿಎಂ ಸಿದ್ದರಾಮಯ್ಯ ರಾಜಕೀಯ ಅಂತ್ಯವಾಗುತ್ತೆ ನೋಡ್ತಿರಿ ಎಂದು ಸವಾಲೆಸೆದ ದೇವೇಗೌಡರು
ಸಿದ್ದರಾಮಯ್ಯ ರಾಜಕೀಯ ಜೀವನ ಆರಂಭವಾಗಿದ್ದು, ಚಾಮುಂಡೇಶ್ವರಿಯಲ್ಲಿ. ಅಲ್ಲಿಯೇ ಅವರ ರಾಜಕೀಯ ಜೀವನ ಅಂತ್ಯವಾಗಲಿದೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಭಿಪ್ರಾಯಪಟ್ಟಿದ್ದಾರೆ.
ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಬೆಳೆದು ಅಧಿಕಾರ ಅನುಭವಿಸಿ ಬೇರೆ ಪಕ್ಷಕ್ಕೆ ಹೋಗಿ ಇದೀಗ ಮಾತೃಪಕ್ಷವನ್ನೇ ಮುಗಿಸಲು ಯತ್ನಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಮಾಡಿದರೂ ಸಾಕಾಗದೇ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿಯಾದರು. ಆದರೂ ಸಾಲದೆಂಬಂತೆ ಇದೀಗ ಮಾತೃಪಕ್ಷಕ್ಕೇ ದ್ರೋಹ ಬಗೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು.