ಭರದಿಂದ ಸಾಗಿದ ಅಭಿವೃದ್ಧಿ ಕಾಮಗಾರಿ

ಭಾನುವಾರ, 16 ಜುಲೈ 2023 (14:56 IST)
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ.
ಇನ್ನು ಸಂಸದ ಬಿ.ವೈ. ರಾಘವೇಂದ್ರ ಜೋಗ ಅಭಿವೃದ್ಧಿ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಜೋಗದ ಜಲಪಾತದ ಸಮಗ್ರ ಅಭಿವೃದ್ಧಿ ನಡೆಯುತ್ತಿದೆ. ಜೋಗ ವೀಕ್ಷಣಾ ಸ್ಥಳ, ವೀವ್ ಗ್ಯಾಲರಿ, ಎಂಟ್ರಿ ಗೇಟ್, ಗೆಸ್ಟ್​ ಹೌಸ್, ಮಕ್ಕಳ ಪಾರ್ಕ್, ಉಪಹಾರ ಗೃಹ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ.. ಜಲಪಾತ ಹತ್ತಿರದ ವೀಕ್ಷಣೆಗೆ ಅನುಕೂಲವಾಗುವಂತೆ ರೋಪ್ ವೇ, ಜಿಪ್ ಲೈನ್ ಸಹ ನಿರ್ಮಾಣ ಮಾಡಲಾಗುತ್ತಿದೆ. ಜೋಗ ಜಲಪಾತದ ಸಮಗ್ರ ಅಭಿವೃದ್ಧಿ ಕಾರ್ಯ ಶೇ. 70 ರಷ್ಟು ಪೂರ್ಣವಾಗಿದೆ.. ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಮುಗಿಯುವ ಸಾಧ್ಯತೆಯಿದೆ. ಕಾಮಗಾರಿ ಪರಿಶೀಲಿಸಿ, ತ್ವರಿತವಾಗಿ ಪೂರ್ಣಗೊಳಿಸಲು ಬಿ.ವೈ. ರಾಘವೇಂದ್ರ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಾಲನೆ ನೀಡಿದ್ದ ಜೋಗ ಜಲಪಾತದ ಅಭಿವೃದ್ಧಿ ಕಾರ್ಯಕ್ಕೆ 185 ಕೋಟಿ ರೂ. ವೆಚ್ಚ ಮಂಜೂರಾಗಿದ್ದು, ಮಾಜಿ ಸಿಎಂ ಬಿಎಸ್​​​ ಯಡಿಯೂರಪ್ಪ ಅನುದಾನ ಬಿಡುಗಡೆಗೊಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ