ಬೆಂಗಳೂರು ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿವೀಕ್ಷಣೆಯನ್ನು ಇಂದು ಬೆಳಿಗ್ಗೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ನಡೆಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಸೇರಿದಂತೆ ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.