ಬಹುಮತ ಸಾಬೀತಿಗೂ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್
ಮಂಗಳವಾರ, 26 ನವೆಂಬರ್ 2019 (18:09 IST)
ಬಹುಮತ ಸಾಬೀತಿಗೆ ಸುಪ್ರೀಂಕೋರ್ಟ್ 24 ಗಂಟೆ ಸಮಯ ನೀಡಿದ್ದರೂ ಸಹ ಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಗತ್ಯ ಸದಸ್ಯರ ಕೊರತೆ ಹಿನ್ನಲೆಯಲ್ಲಿ ಡಿಸಿಎಂ ಅಜಿತ್ ಪವಾರ್ ಬೆಳಗ್ಗೆ ರಾಜೀನಾಮೆ ನೀಡಿದ್ರು. ಅದರ ಬೆನ್ನಲ್ಲೇ ಸಂಜೆ ವೇಳೆಗೆ ಸಿಎಂ ದೇವೇಂದ್ರ ಫಡ್ನವೀಸ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ದೊಡ್ಡ ಪಕ್ಷವಾಗಿದ್ದರೂ ಶಿವಸೇನೆ ಹಠದಿಂದಾಗಿ ಬಿಜೆಪಿ ಅಧಿಕಾರದಿಂದ ದೂರ ಉಳಿಯುತ್ತಿದೆ ಎಂದು ಕಿಡಿಕಾರಿದ್ದಾರೆ.