ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

Sampriya

ಗುರುವಾರ, 4 ಸೆಪ್ಟಂಬರ್ 2025 (18:21 IST)
Photo Credit X
ಮಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎಯಿಂದ ತನಿಖೆ ನಡೆಸಬೇಕೆಂದು ಸನಾತನ ಸಂತ ನಿಯೋಗ ಬ್ಯಾನರ್ ಅಡಿಯಲ್ಲಿ ಕರ್ನಾಟಕದ ವಿವಿಧ ಮಠಗಳ ಮಠಾಧೀಶರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಒತ್ತಾಯಿಸಿತು. 

ರಾಜಶೇಖರಾನಂದ ಸ್ವಾಮೀಜಿ ಅವರ ಪ್ರಕಾರ, 'ಸನಾತನ ಸಂತ ನಿಯೋಗ' ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ವಿವಾದದ ಬಗ್ಗೆ ಚರ್ಚೆ ನಡೆಸಿತು.

ಶಾ ಭೇಟಿ ಬಳಿಕ ಪಿಟಿಐ ಜತೆ ಮಾತನಾಡಿದ ಸ್ವಾಮೀಜಿ ಅವರು, ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸಂಪುಟ ಸಭೆಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಮಿತ್ ಶಾ ನಿಯೋಗಕ್ಕೆ ಭರವಸೆ ನೀಡಿದೆ ಎಂದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ನಾವು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇವೆ ಮತ್ತು ಅವರ ಭರವಸೆಯಿಂದ ನಮಗೆ ಸಂತೋಷವಾಗಿದೆ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ