ಧರ್ಮಸ್ಥಳ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ: ಸುನಿಲ್ ಕುಮಾರ್‌

Sampriya

ಗುರುವಾರ, 7 ಆಗಸ್ಟ್ 2025 (14:36 IST)
Photo Credit X
ಬೆಂಗಳೂರು: ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ತನಿಖೆ, ಕಳೇಬರಹ ಶೋಧ ನೆಪದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್‌ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು. ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತಿಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದಿದ್ದಾರೆ.

ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ ಎಂದು ಬರೆದುಕೊಂಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ