ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

Sampriya

ಮಂಗಳವಾರ, 29 ಜುಲೈ 2025 (16:39 IST)
Photo Credit X
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಹಲವು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂದ ಇದೀಗ ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.

ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗದಲ್ಲಿ ಬೆಳಗ್ಗೆಯಿಂದ ಕಳೆಬರಹಕ್ಕೆ ಪತ್ತೆಗೆ ಕಾರ್ಮಿಕರು ಪೊಲೀಸರ ಬಿಗಿ ಭದ್ರತೆಯಲ್ಲಿ ಮಣ್ಣು ಅಗೆಯಲಾಯಿತು. ಆದರೆ  ಇಲ್ಲಿ ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯುವ ಕಾರ್ಯ ಮುಂದುವರಿಸಲು ಎಸ್ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಸಾಕ್ಷಿ ದೂರುದಾರ ಮೊದಲು ತೋರಿಸಿದ ಜಾಗದಲ್ಲಿ ಅಗೆಯುವ ಕಾರ್ಯವನ್ನು ಮಧ್ಯಾಹ್ನ‌ 12 ಗಂಟೆ ಸುಮಾರಿಗೆ ಆರಂಭಿಸಲಾಗಿತ್ತು.

'ಸುಮಾರು 3 ಅಡಿ ಆಳದವರೆಗೆ ಅಗೆಯಲಾಗಿದೆ. ಮೃತದೇಹದ ಕುರುಹುಗಳು ಇದುವರೆಗೂ ಸಿಕ್ಕಿಲ್ಲ. ಮಣ್ಣು ಅಗೆದಂತೆ ನೀರು ಒಸರುತ್ತಿದೆ. ಹಾಗಾಗಿ ಜೆಸಿಬಿ ತರಿಸಿ ಅಗೆಯುವ ಕಾರ್ಯ ಮುಂದುವರಿಸಲಾಗುತ್ತದೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ