ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

Krishnaveni K

ಬುಧವಾರ, 23 ಜುಲೈ 2025 (14:13 IST)
Photo Credit: X
ಧರ್ಮಸ್ಥಳ: ಇಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರಿನ ತನಿಖೆ ನಡೆಸಲು ಸರ್ಕಾರ ರಚಿಸಿರುವ ಎಸ್ಐಟಿ ತಂಡ ಈಗ ಪಾರದರ್ಶಕವಾಗಿ ತನಿಖೆ ನಡೆಸಲು ಮಾಸ್ಟರ್ ಪ್ಲ್ಯಾನ್ ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಹಲವು ಕೊಲೆಗಳಾಗಿವೆ. ನಾನೇ ನೂರಾರು ಶವಗಳನ್ನು ಕಾಡಿನಲ್ಲಿ ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಕೇಸ್ ರಾಜ್ಯಾದ್ಯಂತ ಭಾರೀ ಕೋಲಾಹಲ ಸೃಷ್ಟಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಐಪಿಎಸ್ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ.

ಇಂದಿನಿಂದ ಧರ್ಮಸ್ಥಳದಲ್ಲಿ ಎಸ್ಐಟಿ ತಂಡ ತನಿಖೆ ಆರಂಭಿಸಿದೆ. ಸರ್ಕಾರ ರಚಿಸಿರುವ ತಂಡಕ್ಕೆ ಸಹಾಯ ಮಾಡಲು 20 ಪೊಲೀಸರ ತಂಡವನ್ನು ಸೇರಿಸಿಕೊಳ್ಳಲಾಗಿದೆ. ಈ ತಂಡದಲ್ಲಿ ಎಸ್ ಪಿ ಗ್ರೇಡ್ ನ ಅಧಿಕಾರಿಗಳಿಂದ ಹಿಡಿದು ಕಾನ್ಸ್ ಟೇಬಲ್ ಲೆವೆಲ್ ವರೆಗೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಆದರೆ ಈ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳನ್ನು ಹೊರತುಪಡಿಸಿ ಉಡುಪಿ, ಶಿರಸಿ ಸೇರಿದಂತೆ ರಾಜ್ಯದ ಬೇರೆ ಭಾಗದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸ್ಥಳೀಯ ಅಧಿಕಾರಿಗಳನ್ನು ನಿಯೋಜಿಸಿದರೆ ಪ್ರಭಾವ ಬೀರುವ ಅಥವಾ ಪಕ್ಷಪಾತದ ದೂರು ಬರಬಹುದು ಎಂಬ ಕಾರಣಕ್ಕೆ ಬೇರೆ ಜಿಲ್ಲೆಗಳ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಇದೀಗ ಎಸ್ಐಟಿ ತಂಡ ಮೊದಲು ಇಲ್ಲಿ ನಡೆದ ಅಸಹಜ ಸಾವುಗಳ ಮಾಹಿತಿಗಳನ್ನು ಸಂಗ್ರಹಿಸಲಿದೆ. ಬಳಿಕ ದೂರುದಾರ ಹೇಳಿದಂತೆ ಶವ ಹೂತಿಟ್ಟ ಜಾಗದಲ್ಲಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ