ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

Krishnaveni K

ಮಂಗಳವಾರ, 22 ಜುಲೈ 2025 (20:40 IST)
Photo Credit: Instagram
ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ತನಿಖೆಯನ್ನು ಎಸ್ಐಟಿ ತಂಡ ಆರಂಭಿಸಲಿದೆ. ಧರ್ಮಸ್ಥಳದಲ್ಲಿ ನೂರಾರು ಕೊಲೆಗಳಾಗಿವೆ ಎಂಬ ಆರೋಪಗಳ ಬಗ್ಗೆ ಎಸ್ಐಟಿ ತಂಡ ತನಿಖೆ ನಡೆಸಲಿದೆ.

ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಾನೇ ಹಲವು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಪೊಲೀಸರ ಮುಂದೆ ಶರಣಾಗಿದ್ದ. ಪ್ರಕರಣ ಈಗ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು.

ಈ ತಂಡ ನಾಳೆಯಿಂದ ಧರ್ಮಸ್ಥಳದಲ್ಲಿ ತನಿಖೆ ಆರಂಭಿಸಲಿದೆ. ನಾಳೆ ಧರ್ಮಸ್ಥಳಕ್ಕೆ ಆಗಮಿಸಿ ಹೇಳಿಕೆ ನೀಡಿರುವ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಿದೆ. ಬಳಿಕ ಆತ ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆ ಪ್ರತಿಯನ್ನು ಪಡೆದುಕೊಳ್ಳಲಿದೆ.

ಇದೀಗ ಆತ ಸಂಗ್ರಹಿಸಿಕೊಟ್ಟಿರುವ ಅಸ್ಥಿಪಂಜರದ ಡಿಎನ್ ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಬಳಿಕ ಆತ ಹೇಳಿದಂತೆ ಶವಗಳನ್ನು ಹೂತಿಟ್ಟಿರುವ ಜಾಗಗಳಿಗೆ ತೆರಳಿ ಹುಡುಕಾಟ ನಡೆಸಲಿದೆ. ಇದಾದ ಬಳಿಕ ಕೋರ್ಟ್ ಗೆ ವರದಿ ಸಲ್ಲಿಸಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ