ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ, ನಮಗೂ ಒಂದು ಕಾಲ ಬರುತ್ತದೆ: ಸಿ.ಟಿ. ರವಿ ಆಕ್ರೋಶ

Sampriya

ಶುಕ್ರವಾರ, 20 ಡಿಸೆಂಬರ್ 2024 (15:16 IST)
ಬೆಳಗಾವಿ: ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಬೆಳಗಾವಿ ಐದನೇ ಜೆಎಂಎಫ್ ಸಿ ನ್ಯಾಯಾಲಯದ ಹೊರಗಡೆ ಬರುವ ಸಂದರ್ಭದಲ್ಲಿ ಇಂದು ಮಾತನಾಡಿದ ಸಿ.ಟಿ.ರವಿ, ನನ್ನನ್ನು ರಾತ್ರಿಯಡಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದಾರೆ. ಯಾವುದೇ ನೋಟೀಸ್ ನೀಡಿಲ್ಲ ಎಂದು ಆರೋಪಿಸಿದರು.

ಅಕ್ರಮವಾಗಿ ಬಂಧನ ಮಾಡಿ ರಾತ್ರಿಯಿಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ ಸರ್ವಾಧಿಕಾರಿ ಧೋರಣೆ ಮೆರೆದಿದ್ದಾರೆ. ಹಲ್ಲೆ ಮಾಡಿದ್ದಾರೆ. ಎಲ್ಲದಕ್ಕೂ ಒಂದು ಪೂರ್ಣ ವಿರಾಮ ಇರುತ್ತದೆ. ಇದರಲ್ಲೂ ಪೂರ್ಣ ವಿರಾಮ ಬೀಳುತ್ತದೆ ಎಂದು ಕಿಡಿಕಾರಿದರು.

ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅತ್ತೆಗೊಂದು ಕಾಲ. ಸೊಸೆಗೊಂದು ಕಾಲ. ನಮಗೂ ಒಂದು ಕಾಲ ಬರುತ್ತದೆ ಎಂದು ಸಿ.ಟಿ.ರವಿ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ