ಜೆಡಿಎಸ್‌ನಲ್ಲಿ ಭಿನ್ನಾಭಿಪ್ರಾಯ: ಕುಮಾರಸ್ವಾಮಿ ಪರವಹಿಸಿದ ಮಧು

ಭಾನುವಾರ, 29 ನವೆಂಬರ್ 2015 (13:59 IST)
ಜೆಡಿಎಸ್ ಪಕ್ಷದಲ್ಲಿ ಕೆಲವು ಗೊಂದಲಗಳಿರುವುದು ನಿಜ. ಪಕ್ಷದ ವೇದಿಕೆಯಲ್ಲಿ ಸಮಸ್ಯೆ ಬಗೆಹರಿಸಿದರೆ ಪಕ್ಷಕ್ಕೆ ಒಳ್ಳೆಯದು. ಈ ಭಿನ್ನಾಭಿಪ್ರಾಯಗಳನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡರು ಬಗೆಹರಿಸುತ್ತಾರೆಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ  ವಿಶ್ವಾಸ ವ್ಯಕ್ತಪಡಿಸಿದರು.

ಬಹಿರಂಗವಾಗಿ ಕುಮಾರಸ್ವಾಮಿ ಬೆಂಬಲಕ್ಕೆ ಬಂದಿರುವ ಮಧು ಬಂಗಾರಪ್ಪ ಚುನಾವಣೆಯಲ್ಲಿ 7-8 ಸ್ಥಾನಗಳಲ್ಲಿ ಜೆಡಿಎಸ್ ಜಯಗಳಿಸುವ ಸಾಧ್ಯತೆಯಿದ್ದು, ಹಾಗಾಗಿ ಕಾಂಗ್ರೆಸ್ ಜತೆ ವಿಧಾನಪರಿಷತ್ ಚುನಾವಣೆಯಲ್ಲಿ  ಮೈತ್ರಿ ಬೇಕಾ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಮಧು ಹೇಳಿದರು. ಜಮೀರ್ ಅಹ್ಮದ್ ಮತ್ತು ಚೆಲುವನಾರಾಯಣ ಸ್ವಾಮಿ ಕಾಂಗ್ರೆಸ್ ಜತೆ ಮೈತ್ರಿಗೆ ಮುಂದಾಗಿದ್ದರಿಂದ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ನಡುವೆ ಭಿನ್ನಾಭಿಪ್ರಾಯ ಉದ್ಭವಿಸಿತ್ತು.

ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದರೆ ಒಳಿತು ಎಂದು ಮಧು ಬಂಗಾರಪ್ಪ ಹೇಳಿದರು. ಜಮೀರ್ ಅಹ್ಮದ್ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಜತೆ ಕೂಡ ಮೈತ್ರಿ ಕುರಿತಂತೆ ಮಾತುಕತೆ ನಡೆಸಿದ್ದರಿಂದ ಕುಮಾರಸ್ವಾಮಿ ಕೆರಳಿ ಕೆಂಡವಾಗಿದ್ದರು. ಹುಡುಗಾಟಿಕೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಬಳಿಕ ಜಮೀರ್ ಅಹ್ಮದ್ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಮುರಿದುಬಿದ್ದಿರುವುದಾಗಿ ತಿಳಿಸಿದ್ದರು. 

ವೆಬ್ದುನಿಯಾವನ್ನು ಓದಿ