ಡಿಐಜಿ ರೂಪಾ ವರ್ಗಾವಣೆ: ಸಂಪುಟ ಸಭೆಯಲ್ಲಿ ಸಿಎಂ ಸ್ಪಷ್ಟನೆ

ಬುಧವಾರ, 19 ಜುಲೈ 2017 (16:42 IST)
ಇಂದು ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಡಿಐಜಿ ರೂಪಾ ಮೌಡ್ಗಿಲ್ ಕುರಿತು ನಡೆದ ಚರ್ಚೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
 
ಕಾರಾಗೃಹ ಡಿಐಜಿಯಾಗಿದ್ದ ರೂಪಾ, ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳ ವರದಿಯನ್ನು ಸರಕಾರಕ್ಕೆ ರಹಸ್ಯವಾಗಿ ನೀಡಿದ್ದಲ್ಲಿ ಕ್ರಮ ಜರುಗಿಸಬಹುದಿತ್ತು. ಆದರೆ, ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದು ಅವರು ಮಾಡಿದ ತಪ್ಪಾಗಿದೆ ಎಂದು ತಿಳಿಸಿದ್ದಾರೆ.
 
ಸರಕಾರದಲ್ಲಿ ಉನ್ನತ ಹುದ್ದೆಯಲ್ಲಿರುವವರು ಮಾಧ್ಯಮಗಳಿಗೆ ಮಾಹಿತಿ ನೀಡಬಾರದು ಎನ್ನವುದು ಗೊತ್ತಿದ್ದೂ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದರಿಂದ ಅವರನ್ನು ಅನಿವಾರ್ಯವಾಗಿ ವರ್ಗಾವಣೆ ಮಾಡಲಾಗಿದೆ ಎಂದರು.
 
ಸಾರ್ವಜನಿಕವಾಗಿ ರೂಪಾ ಮೌಡ್ಗಿಲ್, ನಾನ್‌ಸೆನ್ಸ್ ಕ್ರಿಯೇಟ್ ಮಾಡಿದ್ದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ