ಕೆಪಿಸಿಸಿ ಹುದ್ದೆ ಖಾಲಿ ಇಲ್ಲ, ಲಿಂಗಾಯತರು ಕಾಂಗ್ರೆಸ್ ಜೊತೆಗಿದ್ದಾರೆ: ದಿಗ್ವಿಜಯ್ ಸಿಂಗ್

ಮಂಗಳವಾರ, 18 ಏಪ್ರಿಲ್ 2017 (10:38 IST)
ಕೆಪಿಸಿಸಿ ಹುದ್ದೆ ಖಾಲಿ ಇಲ್ಲ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೆಪಿಸಿಸಿ ಹುದ್ದೆಯ ಆಕಾಂಕ್ಷಿಗಳ ಬಾಯಿ ಮುಚ್ಚಿಸಿದ್ದಾರೆ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದೇವೇಳೆ, ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಪಕ್ಷವನ್ನ ಗೆಲ್ಲಿಸಿದ ಮುಖಂಡರಿಗೆ ಧನ್ಯವಾದ ತಿಳಿಸಿದ ದಿಗ್ವಿಜಯ್ ಸಿಂಗ್, ಈ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತ ಮತದಾರರು ಕಾಂಗ್ರೆಸ್ ಜೊತೆಗಿರುವುದು ಸಾಬೀತಾಗಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದೇವೇಳೆ, ಸಂಪುಟ ವಿಸ್ತರಣೆ ಮತ್ತು ವಿಧಾನಪರಿಷತ್`ಗೆ ನಾಮನಿರ್ದೇಶನ ಕುರಿತಂತೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್, ಇವೆರಡೂ ಸಿಎಂ ಸಿದ್ದರಾಮಯ್ಯನವೆ ವಿವೇಚನೆಗೆ ಬಿಟ್ಟ ವಿಚಾರ ಎಂದಿದ್ದಾರೆ. ಈ ಮೂಲಕ ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಬಲ ಸಿಕ್ಕಿರುವುದು ಸ್ಪಷ್ಟವಾಗಿದೆ.

ವೆಬ್ದುನಿಯಾವನ್ನು ಓದಿ