ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದರ ಹೆಚ್ಚಳ: ಗ್ಯಾರಂಟಿಗಾಗಿಯಾ ಎಂದಿದ್ದಕ್ಕೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Krishnaveni K

ಬುಧವಾರ, 20 ನವೆಂಬರ್ 2024 (12:16 IST)
ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಸರ್ಕಾರೀ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಈಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ದರ ಹೆಚ್ಚಳಕ್ಕೆ ಮುಂದಾಗಿದೆ.

ಪ್ರಾಥಮಿಕ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚನ್ನು ಶೇ.15 ರಿಂದ 20 ರವರೆಗೆ ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ, ಗ್ಯಾರಂಟಿಗೆ ಹಣ ಹೊಂದಿಸಲು ಎಲ್ಲಾ ರಂಗದಲ್ಲೂ ಹಣ ವಸೂಲಿ ಮಾಡುತ್ತಿದೆ ಎಂಬ ವಿಪಕ್ಷಗಳ ಆರೋಪಗಳ ಬೆನ್ನಲ್ಲೇ ಇಂತಹದ್ದೊಂದು ಕ್ರಮಕ್ಕೆ ಮುಂದಾಗಿದೆ.

ಇದೂ ಕೂಡಾ ಗ್ಯಾರಂಟಿಗೆ ಹಣ ಕ್ರೋಢೀಕರಿಸುವ ನಿಟ್ಟಿನಲ್ಲಿ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಮಾಡಲು ದರ ಹೆಚ್ಚಳ ಮಾಡುತ್ತಿಲ್ಲ. ಪ್ರತೀ ಬಾರಿಯೂ ಎರಡು ವರ್ಷಕ್ಕೊಮ್ಮೆ ಹೆಚ್ಛಳ ಮಾಡಲಾಗುತ್ತದೆ. ಅದರಂತೆ ಈಗ ಹೆಚ್ಚಳ ಮಾಡುತ್ತಿದ್ದೇವೆ ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

ಈ ವಿಚಾರ ಮತ್ತೆ ವಿಪಕ್ಷಗಳು ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರದಲ್ಲಿ ವಿವಾದಕ್ಕೀಡಾಗಿದೆ. ಇದೀಗ ಹೆಚ್ಚಾಗಿ ಬಡವರೇ ಬರುವ ಆರೋಗ್ಯ ಕೇಂದ್ರಗಳ ದರ ಏರಿಕೆ ಮಾಡಿ ಮತ್ತೊಮ್ಮೆ ಟೀಕೆಗೆ ಗುರಿಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ