ಬೆಳಗಾವಿ: ಬಾಣಂತಿಯರು ಸಾವನ್ನಪ್ಪುವುದು ಪ್ರತೀ ವರ್ಷವೂ ಇದ್ದೇ ಇರುತ್ತದೆ. ಆದರೆ ಇದನ್ನೆಲ್ಲಾ ರಾಜಕೀಯಕ್ಕೆ ಬಳಸಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಾಣಂತಿಯರ ಮರಣಗಳು ಪ್ರತೀ ವರ್ಷವೂ ನಡೆಯುತ್ತದೆ. ಪ್ರತೀ ವರ್ಷ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಆದರೆ ಅದನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಬೆಳಗಾವಿ ಅಧಿವೇಶನಕ್ಕೆ ಮುನ್ನ ಹೇಳಿಕೆ ನೀಡಿದ್ದಾರೆ.
ಅವರ ಈ ಹೇಳಿಕೆ ಕೂಡಾ ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಈಗಾಗಲೇ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಕಾಯುತ್ತಿವೆ. ಈ ನಡುವೆ ದಿನೇಶ್ ಗುಂಡೂರಾವ್ ಈ ರೀತಿ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಲಿದೆ.
ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಇದಕ್ಕೆ ಕಳಪೆ ಗುಣಮಟ್ಟದ ಔಷಧಿಯೇ ಕಾರಣ ಎಂದು ತಿಳಿದುಬಂದಿದೆ. ಅಂತಹ ಕಂಪನಿಗಳನ್ನು ಬ್ಲ್ಯಾಕ್ ಲಿಸ್ಟ್ ಗೆ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನೂ ಘೋಷಿಸಲಾಗಿದೆ. ಈ ನಡುವೆ ಆರೋಗ್ಯ ಸಚಿವರ ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಲಿದೆ.