ರಾಜಸ್ಥಾನದಿಂದ ನಗರಕ್ಕೆ ಬಂದ ಮಾಂಸದ ಬಗ್ಗೆ ಮತ್ತೇ ಸ್ಪಷ್ಟಣೆ ನೀಡಿದ ದಿನೇಶ್ ಗುಂಡೂರಾವ್

Sampriya

ಬುಧವಾರ, 31 ಜುಲೈ 2024 (15:28 IST)
Photo Courtesy X
ಬೆಂಗಳೂರು: ಈಚೆಗೆ ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಸರಬರಾಜಾಗಿದ್ದು ಕುರಿಯ ಮಾಂಸ ಎಂದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ವರದಿಯ ರಿಪೋರ್ಟ್ ಹಂಚಿಕೊಂಡು ಬರೆದುಕೊಂಡಿದ್ದಾರೆ.

ಜುಲೈ 26ರಂದು ನಾಯಿ ಮಾಂಸವನ್ನು ರೈಲಿನ ಮೂಲಕ ನಗರಕ್ಕೆ ತಂದು ಹೋಟೆಲ್‌ಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಅವರ ನೇತೃತ್ವದ ಗುಂಪೊಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿತು. ಈ ಸಂಬಂಧ ಮಾಂಸದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.


ಈಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.

ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ