ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಮನಸ್ಸಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಜೆಡಿಎಸ್ ಜತೆ ಸೇರಿ ಲೋಕಸಭೆ ಚುನಾವಣೆ ಎದುರಿಸಲು ಮನಸ್ಸಿಲ್ಲ. ಹಾಗಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಈ ಮೈತ್ರಿ ಅನಿವಾರ್ಯ. ಅದಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿಕೊಂಡಿದ್ದಾರೆ.
ಜೆಡಿಎಸ್ ಜತೆ ಸೇರಿದರೆ ರಾಜ್ಯದಲ್ಲಿ ಎರಡೂ ಪಕ್ಷಗಳು ಸೇರಿಕೊಂಡು 20 ರಿಂದ 25 ಸ್ಥಾನ ಗೆಲ್ಲಬಹುದು. ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಮೈತ್ರಿ ಅನಿವಾರ್ಯ ಎಂದು ಗುಂಡೂರಾವ್ ಹೇಳಿದ್ದಾರೆ.