ಮತ್ತೆ ಸಿಎಂ ಆಗುತ್ತೇನೆಂದು ಸಿದ್ದರಾಮಯ್ಯ ಹೇಳಿಯೇ ಇಲ್ವಂತೆ!

ಮಂಗಳವಾರ, 28 ಆಗಸ್ಟ್ 2018 (08:18 IST)
ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ತಾನು ಮತ್ತೆ ಸಿಎಂ ಆಗುವೆ ಎಂದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತ್ರ ಸಿದ್ದರಾಮಯ್ಯ ಹೀಗೆ ಹೇಳಿಯೇ ಇಲ್ಲ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವೆ ಎಂದು ಹೇಳಿಯೇ ಇಲ್ಲ. ಮುಂದಿನ ಚುನಾವಣೆ ಸಂದರ್ಭದಲ್ಲಷ್ಟೇ ಕಾಂಗ್ರೆಸ್ ನಿಂದ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದು ನಿರ್ಧಾರವಾಗಲಿದೆ ಎಂದಿದ್ದಾರೆ.

ಸದ್ಯಕ್ಕಂತೂ ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ