ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನ ಆರಂಭ

ಮಂಗಳವಾರ, 15 ನವೆಂಬರ್ 2022 (10:59 IST)
ಹುಬ್ಬಳ್ಳಿ : ಬಹುನಿರೀಕ್ಷಿತ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನ ಸಂಪರ್ಕ ಇಂದಿನಿಂದ ಆರಂಭವಾಗಿದೆ. ಸಚಿವ ಪ್ರಹ್ಲಾದ್ ಜೋಶಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ.
 
ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ ಬಹುದಿನಗಳ ಕನಸೊಂದು ಈಡೇರಿದಂತಾಗಿದೆ. ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿಗೆ ನೇರ ಸಂಪರ್ಕ ದೊರೆತಿರುವುದು ನಗರದ ಪ್ರಗತಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಿದೆ.

ಪ್ರತಿ ನಿತ್ಯ ಈ ಸೇವೆ ಲಭ್ಯವಿರುತ್ತದೆ. ಹುಬ್ಬಳಿಯ ಜನ ಕೇವಲ 2 ಗಂಟೆ 30 ನಿಮಿಷದಲ್ಲಿ ದೆಹಲಿಗೆ ಪ್ರಯಾಣಿಸಬಹುದಾಗಿದೆ. 

ಇಂಡಿಗೋ ವಿಮಾನ ಪ್ರತಿದಿನ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಖ್ಯೆ 6ಇ-5625 ಬೆಳಿಗ್ಗೆ 10:00ಕ್ಕೆ ಹೊರಟು 12-45ಕ್ಕೆ ಹುಬ್ಬಳ್ಳಿ ತಲುಪಲಿದೆ. ಮರಳಿ ಮಧ್ಯಾಹ್ನ 1:15ಕ್ಕೆ ಹುಬ್ಬಳ್ಳಿಯಿಂದ ಹೊರಟು 3:45ಕ್ಕೆ ದೆಹಲಿ ತಲುಪಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ