ಆದೇಶ ಉಲ್ಲಂಘಿಸಿದವರಿಗೆ ದಂಡಾಸ್ತ್ರ

ಗುರುವಾರ, 3 ಆಗಸ್ಟ್ 2023 (19:00 IST)
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತಗಳನ್ನ ತಡೆಯಲು ನಿನ್ನೆಯಿಂದ ಬೈಕ್, ಆಟೋ, ಟ್ರ್ಯಾಕ್ಟರ್ ಮತ್ತು ಮಲ್ಟಿ ಆ್ಯಕ್ಸೆಲ್ ವಾಹನಗಳಿಗೆ ನಿಷೇಧ ಹೇರಿದೆ. ಆದರೂ ಕೋಣನ ಮುಂದೆ ಕಿನ್ನರಿ ಬಾರಿಸಿ ಏನು ಪ್ರಯೋಜನ ಎಂಬಂತೆ ನಿನ್ನೆಯಿಂದಲೇ ದ್ವಿಚಕ್ರ ವಾಹನ ಸವಾರರು ನಿಯಮ ಉಲ್ಲಂಘಿಸಿ ಸಂಚಾರ ಮಾಡುತ್ತಿದ್ದಾರೆ. ಆದ್ದರಿಂದ ಆದೇಶ ಉಲ್ಲಂಘಿಸಿ ದಶಪಥ ಹೆದ್ದಾರಿಯಲ್ಲಿ ಸಂಚಾರ ಮಾಡಿದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಮದ್ದೂರು ಪೊಲೀಸರು ನಿನ್ನೆ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ದಂಡ ವಸೂಲಿ ಮಾಡಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಮದ್ದೂರು ಪೊಲೀಸರು, ಎಷ್ಟೇ ಹೇಳಿದರೂ ದಶಪಥ ಹೆದ್ದಾರಿಯಲ್ಲಿ ಸಂಚರಿಸಿದ್ದಾರೆ. ಆದ್ದರಿಂದ ಪೊಲೀಸರು ಮದ್ದೂರು ತಾಲೂಕಿನ ಗಡಿಭಾಗ ನಿಡಘಟ್ಟ ಬಳಿ ಆದೇಶ ಧಿಕ್ಕರಿಸಿದ 40 ದ್ವಿಚಕ್ರ ವಾಹನ ಹಾಗೂ ಒಂದು ಟ್ರಾಕ್ಟರ್​ಗೆ ತಲಾ 500 ರೂಪಾಯಿಯಂತೆ ದಂಡ ವಿಧಿಸಿದ್ದಾರೆ. ಕೆಲ ವಾಹನಗಳಿಗೆ ನಿಷೇಧ ಹೇರಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಎಕ್ಸ್​ಪ್ರೆಸ್ ರಸ್ತೆಗಾಗಿ ನಮ್ಮ ಜಮೀನು ಕೊಟ್ಟಿದ್ದೇವೆ. ನಮಗೂ ಇಂತಹ ರಸ್ತೆಯಲ್ಲಿ ಓಡಾಡಬೇಕು ಅಂತ ಆಸೆ ಇದೆ. ಬೈಕ್​ಗಳಿಗೂ ಅವಕಾಶ ಮಾಡಬೇಕು ಎಂದು ವಾಹನ ಸವಾರರು ಮತ್ತು ಸ್ಥಳೀಯರು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ