ಕೇಸ್ ಬಗ್ಗೆ ಸಿಎಂ ಜೊತೆ ಚರ್ಚಿಸಿ ಕಾನೂನು ಕ್ರಮ

ಬುಧವಾರ, 16 ಆಗಸ್ಟ್ 2023 (19:35 IST)
ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ ಅವರ ಹೇಳಿಕೆಗಳ ಬಗೆಗಿನ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇಬ್ಬರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಕೂಡ ಇಂತಹ ಹೇಳಿಕೆಗಳನ್ನು ಸಹಿಸಲ್ಲ. ಹೀಗೆ ಮಾತನಾಡೋರು ಅರ್ಥ ಮಾಡಿಕೊಳ್ಳಬೇಕು. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡೋದು ಯಾರೇ ಆದರು ನಿಲ್ಲಿಸಬೇಕು. ಗಾದೆ ಇದೆ ಅಂತ ಹೇಳಿ ಕೀಳಾಗಿ ಮಾತಾಡೋದು ಸರಿಯಲ್ಲ. ಇದೊಂದು ನಾನ್​ಸೆನ್ಸ್ ಹೇಳಿಕೆ ಎಂದು ಕಿಡಿಕಾರಿದರು. ಇದನ್ನು ನಿಲ್ಲಿಸಿದರೆ ಒಳ್ಳೆಯದು. ಇದನ್ನು ನಾನು ಕೂಡ ಸಹಿಸಲ್ಲ. ಹೀಗೆ ಮಾತನಾಡೋದು ಒಂದು ಸಮುದಾಯಕ್ಕೆ ಮಾಡಿದ ಅವಮಾನ ಅಲ್ಲವಾ? ಸಚಿವರೇ ಆಗಲಿ ಯಾರೇ ಆಗಲಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ ಕೇಸ್ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ