ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೈ.ಕ.ಪ್ರ.ಅ.ಮಂಡಳಿ ರೂಪರೇಷೆಗಳ ಚರ್ಚೆ

ಭಾನುವಾರ, 25 ನವೆಂಬರ್ 2018 (16:35 IST)
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಬಿ. ಪಾಟೀಲ ಹೇಳಿದರು.

ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಕರೆದ ಸಭೆಯನ್ನುದ್ದೇಶಿಸಿ ಮಾತನಾಡಿ, ಹೆಚ್.ಕೆ.ಆರ್.ಡಿ.ಬಿ.ಗೆ ಸರ್ಕಾರ ಅನುಮೋದಿಸಿರುವ ಹಾಗೂ ಬಿಡುಗಡೆಯಾಗಿರುವ ಅನುದಾನದ ಹಾಗೂ ಮಂಡಳಿಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಹೈ.ಕ.ಪ್ರ.ಅ.ಮಂಡಳಿಯಿಂದ 2014-15 ರಿಂದ ಇಲ್ಲಿಯವರೆಗೆ ಬಿಡುಗಡೆಯಾದ ಅನುದಾನಕ್ಕೆ ತಕ್ಕಂತೆ ಕಾಮಗಾರಿಗಳನ್ನು ಪಾರದರ್ಶಕವಾಗಿ ಕೈಗೊಳ್ಳಲಾಗಿದೆ. ನಂಜುಂಡಪ್ಪ ವರದಿ ಅನುಸಾರ ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳಲ್ಲಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮುಂದೆ   ಮೈಕ್ರೋ ಅಥವಾ ಮ್ಯಾಕ್ರೋ ಯೋಜನೆಯಡಿಯಲ್ಲಿ ಯಾವುದೇ ತಾರತಮ್ಯವಾಗದಂತೆ ನೋಡಿಕೊಳ್ಳಲಾಗುವುದು. ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು. ಕಾಮಗಾರಿಗಳು ಬೇಗ ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕರು ಕ್ರಿಯಾ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಮಂಡಳಿಗೆ ಸಲ್ಲಿಸಬೇಕು. ಈ ಸಭೆಯಲ್ಲಿ ಸದಸ್ಯರು ಕೇಳಿರುವ ಪ್ರಶ್ನೆಗಳನ್ನು ದಾಖಲಿಸಲಾಗಿದ್ದು, 2-3 ದಿನಗಳಲ್ಲಿ ಉತ್ತರಿಸಲಾಗುವುದು ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ