ನೆರೆ ಪೀಡಿತ ಜಿಲ್ಲೆಗಳಲ್ಲಿ ರೋಗ ಹರಡದಂತೆ ಕಟ್ಟೆಚ್ಚರ

ಶನಿವಾರ, 24 ಜುಲೈ 2021 (16:55 IST)
ಬೆಂಗಳೂರು (ಜು.24): ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ  ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ  ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಸುಧಾಕರ್ ಸೂಚನೆ ನೀಡಿದ್ದಾರೆ.

•ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ
•ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ  ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಎಚ್ಚರಿಕೆ

ಪ್ರವಾಹ ಪೀಡಿತ  ಗ್ರಾಮಗಳು ಸ್ಥಳಾಂತರಗೊಂಡಿರುವ  ಗ್ರಾಮಗಳ ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳ ಕುರಿತು ಕೈಗೊಳ್ಳಬೇಕಿರುವ  ಸಿದ್ಧತೆಗಳ ಬಗ್ಗೆ ಶುಕ್ರವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಭಾರೀ ಮಳೆ : ರಾಜ್ಯದಿಂದ ತೆರಳುವ 15 ರೈಲು ಸಂಚಾರ ರದ್ದು
ಈ ವೇಳೆ ಮಾತನಾಡಿದ ಅವರು ಕಾಳಜಿ  ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು  ಗುಣಮಟ್ಟದ ಆಹಾರ ಪೂರೈಸಬೇಕು. ಕೇಂದ್ರಗಳ ಒಳಗೆ ಮತ್ತು ಹೊರಗೆ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ರೋಗ ನಿರೋಧಕ ದ್ರಾವಣ ಸಿಂಪಡಿಸಬೇಕು, ಕೇಂದ್ರದಲ್ಲಿರುವವರ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಿದರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ