ಜಾರಕಿಹೊಳಿ ಸಿಡಿ ಕೇಸ್ ನಿಂದ ಪಕ್ಷಕ್ಕೆ ಮುಜುಗರವಾಗಿದೆ- ಬೇಸರಗೊಂಡ ಡಿವಿ ಸದಾನಂದ ಗೌಡ

ಶನಿವಾರ, 6 ಮಾರ್ಚ್ 2021 (11:49 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕೇಸ್ ಸಂಬಂಧಿಸಿದಂತೆ ಜಾರಕಿಹೊಳಿ ಸಿಡಿ ಕೇಸ್ ನಿಂದ ಪಕ್ಷಕ್ಕೆ ಮುಜುಗರವಾಗಿದೆ ಎಂದು  ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಸಿಡಿಗಳು ತನ್ನದೇ ಪ್ರಭಾವ ಬೀರುತ್ತದೆ. ಟೆಕ್ನಾಲಜಿ ಬಹಳ ಬೆಳೆದಿದೆ. ಯಾರು ಏನು ಬೇಕಾದ್ರೂ ಮಾಡಬಹುದು. ಆದ್ರೆ ಇದು ತಿರುಚಿದ ಸಿಡಿ ಅಂತಾ ಹೇಳುತ್ತಿಲ್ಲ. ತನಿಖೆ ನಡೆಯುತ್ತಿದೆ, ಸತ್ಯ ಹೊರಬರಲಿ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ