ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಿ: ಈಶ್ವರಪ್ಪಗೆ ಬಿಜೆಪಿ ತಾಕೀತು

ಗುರುವಾರ, 6 ಅಕ್ಟೋಬರ್ 2016 (15:20 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಲಾಲ್ ತಾಕೀತು ಮಾಡಿದ್ದಾರೆ. 
 
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.
 
ಒಂದೇ ಬಾರಿ, ಬ್ರಿಗೇಡ್ ಕೈ ಬಿಡುವುದರಿಂದ ಸಾರ್ವಜನಿಕರಿಗೆ ತಪ್ಪ ಸಂದೇಶ ರವಾನಿಸಿದಂತಾಗುತ್ತದೆ ಎಂದು ಈಶ್ವರಪ್ಪನವರು ಸ್ಪಷ್ಟಪಡಿಸಿದರು. ಆಗ, ರಾಮಲಾಲ್ ಅವರು ಹಂತ ಹಂತವಾಗಿ ಬ್ರಿಗೇಡ್ ಕೈಬಿಡುವಂತೆ ಸೂಚನೆ ನೀಡಿದರು.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ