ದೀಪಾವಳಿಗೆ ಬಡವರ ಬಂಧು ಯೋಜನೆ ಶುರು

ಗುರುವಾರ, 11 ಅಕ್ಟೋಬರ್ 2018 (19:29 IST)
ರಾಜ್ಯದಲ್ಲಿರುವ ಬೀದಿ ವ್ಯಾಪಾರಿಗಳಿಗೆ 'ಬಡವರ ಬಂಧು' ಮೂಲಕ ದೀಪಾವಳಿ ವೇಳೆ ಸಹಾಯಧನ
ನೀಡಲಾಗುವುದು ಎಂದು ಸಹಕಾರ ಸಚಿವ ಹೇಳಿದ್ದಾರೆ.

ಸಚಿವ ಬಂಡೆಪ್ಪ ಕಾಶೆಂಪೂರ ಈ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ.

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. ಈವರೆಗೆ 40,000 ಕೋಟಿ ರೈತರ ಸಾಲಮನ್ನಾ ಆಗಿದೆ ಎಂದರು. ಇನ್ನು ಸ್ವಸಹಾಯ ಸಂಘಗಳಿಗೂ ಸಹಾಯಹಸ್ತ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ.

ಮೀಟರ್ ಬಡ್ಡಿ ಮಟ್ಟ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ರಾಜ್ಯದಲ್ಲಿ ಕಾಮನ್ ಸಾಫ್ಟ್‌ವೇರ್ ಮೂಲಕ  ಕಾರ್ಯನಿರ್ವಹಣೆಗೆ ಒತ್ತು ನೀಡಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ