ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಬಿಬಿಎಂಪಿ ಚುನಾವಣೆಗೂ ಚುನಾವಣಾ ಆಯೋಗ ಸಜ್ಜಾಗುತ್ತಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲೇ ಇಂದು ಬೆಂಗಳೂರಿನ ಮಾಜಿ ಮೇಯರ್ ಗಳ ಜೊತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಸಭೆಯನ್ನು ನಡೆಸಿದರು.ಮಾಜಿ ಮೇಯರ್ ಗಳ ಸಭೆ ಬಳಿಕ ಮಾತನಾಡಿದಂತ ಅವರು, ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್ ಗಳ ಜತೆ ಸಭೆ ಮಾಡಿ ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದೇನೆ..ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನ್ಯತೆಗಳಿವೆ, ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ.ಇದನ್ನು ಹೇಗೆ ತಡೆಯಬಹುದು ಎಂದು ಸಲಹೆ ಪಡೆದಿದ್ದು, ಕಸದ ವಾಹನ ಟ್ರ್ಯಾಕ್ ಮಾಡುವುದು, ಕಸವನ್ನು ಎಲ್ಲೆದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು, ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ. ಸದಸ್ಯದಲ್ಲೇ ಇದನ್ನು ನಿಯಂತ್ರಿಸಲು ಯಾವ ಸೂಚನೆ ನೀಡಬೇಕು ಎಂದು ಅಧಿಕಾರಿಗಳ ಜತೆ ಸಭೆ ಮಾಡಿ ತೀರ್ಮಾನಿಸುತ್ತೇನೆ ಎಂದು ತಿಳಿಸಿದರು.ಸೋಮವಾರ ಬೆಂಗಳೂರು ನಗರದ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದು, ಅವರಿಂದಲೂ ಸಲಹೆಗಳನ್ನು ಪಡೆಯುತ್ತೇನೆ. ನಂತರ ನಮ್ಮ ಪಕ್ಷದ ಶಾಸಕರ ಜತೆ ಪ್ರತ್ಯೇಕ ಸಭೆ ಮಾಡುತ್ತೇನೆ ಎಂದ್ರು.