ತಮ್ಮ ಡಿಕೆ ಸುರೇಶ್ ಗೆ ಪಟ್ಟ ಕಟ್ಟಿ ಕೆಪಿಸಿಸಿ ಜುಟ್ಟು ತನ್ನಲ್ಲೇ ಇಟ್ಟುಕೊಳ್ಳಲು ಡಿಕೆಶಿ ಮಾಸ್ಟರ್ ಪ್ಲಾನ್

Sampriya

ಗುರುವಾರ, 2 ಜನವರಿ 2025 (17:15 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುತ್ತಿದ್ದ ಹಾಗೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೈ ಪಾಳಯದಲ್ಲಿ ಹಲವು ಹೆಸರುಗಳು ಮುನ್ನೆಲೆಗೆ ಬರುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದಲ್ಲಿ ಭಾರೀ ಪೈಪೋಟಿಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಕ್ರಾಂತಿ ಹಬ್ಬದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ಆಯ್ಕೆಯಾಗಲಿದ್ದಾರೆ.

ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷತೆಯಲ್ಲಿ ಈಗಾಗಲೇ ರಾಜ್ಯದಲ್ಲಿ ನಡೆದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಡಿಕೆ ಶಿವಕುಮಾರ್ ಅವರ ಗುರಿ ಸಿಎಂ ಕುರ್ಚಿ ಮೇಲಿದೆ ಎಂಬುದು ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆ.  ಆದರೆ ಕೆಪಿಸಿಸಿ ಜವಾಬ್ದಾರಿಯನ್ನು ಸಹೋದರ ಡಿಕೆ ಸುರೇಶ್ ಹೆಗಲಿಗೆ ನೀಡಲು ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿ.ಕೆ.ಸುರೇಶ್‌ ಸೋತಿದ್ದ ಸಹೋದರಿನಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲು ಡಿಕೆಶಿ ಪ್ಲಾನ್ ಮಾಡಿದ್ದಾರೆ.  

ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ಭಾರಿ ಮಹತ್ವದ ಕುರ್ಚಿ ಆಗಿರುವುದರಿಂದ ಇದು ಕೈತಪ್ಪಿದರೆ ಮುಂದಿನ ರಾಜಕೀಯ ಹಾದಿಗೆ ಕಷ್ಟವಾಗಬಹುದು ಎಂದು ಹೇಳಲಾಗಿದೆ. ಹಾಗಾಗಿ ತಮ್ಮ ಸಹೋದರ ಡಿ.ಕೆ.ಸುರೇಶ್‌ ಅವರಿಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟರೆ, ಒಂದು ರೀತಿಯಲ್ಲಿ ಕೆಪಿಸಿಸಿ ತಮ್ಮ ಸುಪರ್ದಿಯಲ್ಲೇ ಇರುತ್ತದೆ ಎಂದು ಡಿಕೆ ಶಿವಕುಮಾರ್‌ ಅವರ ಲೆಕ್ಕಚಾರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ