ಕೇಂದ್ರ ನಮ್ಮ ಪಾಲಿನ ತೆರಿಗೆ ಕೊಡ್ತಿಲ್ಲ ಎಂದು ಆರೋಪಿಸುವ ಡಿಕೆ ಶಿವಕುಮಾರ್ ಜಯನಗರಕ್ಕೆ ಮಾಡಿದ್ದೂ ಅದನ್ನೇ ಅಲ್ವಾ

Krishnaveni K

ಬುಧವಾರ, 30 ಅಕ್ಟೋಬರ್ 2024 (11:01 IST)
ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಪಾಲಿನ ತೆರಿಗೆ ನೀಡ್ತಿಲ್ಲ. ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ಕೊಡ್ತಿಲ್ಲ ಎನ್ನುವ ಡಿಸಿಎಂ ಡಿಕೆ ಶಿವಕುಮಾರ್ ಈಗ ಬೆಂಗಳೂರಿನ ಬಿಜೆಪಿ ಶಾಸಕರಿರುವ ಜಯನಗರಕ್ಕೆ ಮಾಡಿದ್ದೂ ಅದನ್ನೇ ಅಲ್ವಾ ಎಂದು ಶಾಸಕ ರಾಮಮೂರ್ತಿ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನ ಎಲ್ಲಾ ಕ್ಷೇತ್ರಗಳಿಗೂ 10 ಕೋಟಿ ಅನುದಾನ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಬೇಕೆಂದೇ ಬಿಜೆಪಿ ಶಾಸಕರಿರುವ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ. ಇದನ್ನು ಅವರು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ ಕೂಡಾ. ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೇ ಜಯನಗರ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಅವರ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಸಿಕೆ ರಾಮಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಸರ್ಕಾರದ ವಿರುದ್ಧ ಆರೋಪ ಮಾಡುವುದೇ ತಪ್ಪಾ? ನಾವೇನೂ ಮಾತನಾಡುವ ಹಾಗೆಯೇ ಇಲ್ಲವೇ . ನಮ್ಮ ದೂರನ್ನು ಎಲ್ಲಿ ಹೇಳಿಕೊಳ್ಳಬೇಕು ಎಂದಿದ್ದಾರೆ.

ಅಷ್ಟೇ ಅಲ್ಲ, ಇದೇ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ಕೇಂದ್ರ ನಮ್ಮ ಪಾಲಿನ ತೆರಿಗೆ ಕೊಡ್ತಿಲ್ಲ. ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ಕೊಡ್ತಾರೆ ಎಂದು ಆಪಾದನೆ ಮಾಡ್ತಾರೆ. ಹಾಗಿದ್ದರೆ ಈಗ ಅವರು ಮಾಡಿದ್ದೂ ಅದನ್ನೇ ಅಲ್ವಾ ಎಂದು ರಾಮಮೂರ್ತಿ ಪ್ರಶ್ನೆ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ