ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
"ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ಅವರು ಹೇಳಿದ್ದಾರೆ.
ಇತ್ತೀಚೆಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷದ ಪರ ಪ್ರಚಾರ ಮಾಡಲು ಬಾರದೇ ಅಲ್ಪಸಂಖ್ಯಾತ ನಾಯಕರು ತಮ್ಮ ಅಸಮಧಾನ ತೋರಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಈಗ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.