ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾದ ಡಿಕೆಶಿ ಇಂದು ಕೋರ್ಟ್ ಗೆ ಹಾಜರು

ಬುಧವಾರ, 4 ಸೆಪ್ಟಂಬರ್ 2019 (10:06 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಿರುವ ಡಿಕೆಶಿಯನ್ನು ಇಂದು ಇಡಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

 

ನಿನ್ನೆ ರಾತ್ರಿ ಡಿಕೆಶಿಯನ್ನು ಬಂಧಿಸಿದ ಇಡಿ ಅಧಿಕಾರಿಗಳು ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದರು. ಅದರಂತೆ ಡಿಕೆಶಿ ಆರೋಗ್ಯ ಸ್ಥಿತಿ ಸಮಾಧಾನಕರವಾಗಿದೆ ಎಂದು ವರದಿ ಬಂದಿದೆ.

ಹೀಗಾಗಿ ಇಂದು ಕೋರ್ಟ್ ಗೆ ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ತಮ್ಮ ಸುಪರ್ದಿಗೆ ಒಪ್ಪಿಸಲು ಮನವಿ ಮಾಡುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ