ಪ್ರಯಾಗ್ ರಾಜ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಆಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೊಗಳಿಕೆಯ ಮಾತನಾಡಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಇಂದು ತೆರೆ ಬೀಳುತ್ತಿದೆ. ಒಂದೂವರೆ ತಿಂಗಳ ಕಾಲ ನಡೆದ ಕುಂಭಮೇಳಕ್ಕೆ ಡಿಕೆ ಶಿವಕುಮಾರ್ ಕೂಡಾ ತಮ್ಮ ಪತ್ನಿ ಸಮೇತ ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ದರು.
ಇದೀಗ ಮಾಧ್ಯಮಗಳೊಂದಿಗೆ ಮಾತನಾಡುವಾಗ ಡಿಕೆ ಶಿವಕುಮಾರ್, ಕುಂಭಮೇಳದ ವ್ಯವಸ್ಥೆ ಬಗ್ಗೆ ಹೊಗಳಿದ್ದಾರೆ. ನಾನು ಹಿಂದೂ, ಅದಕ್ಕೇ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದೆ. ನಾನು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ.
ನಾನು ಹಿಂದೂ ಕುಂಭಮೇಳಕ್ಕೆ ಹೋಗಿದ್ದೆ. ಅಷ್ಟು ಜನ ಬಂದ್ರೂ ಆಯೋಜನೆ ಚೆನ್ನಾಗಿತ್ತು ಎಂದು ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕುಂಭಮೇಳ ಆಯೋಜನೆ ಬಗ್ಗೆ ಕಾಂಗ್ರೆಸ್ಸಿಗರೇ ಟೀಕೆ ಮಾಡುತ್ತಿರುವಾಗ ಡಿಕೆಶಿ ಮೆಚ್ಚುಗೆಯ ಮಾತನಾಡಿ ಗಮನ ಸೆಳೆದಿದ್ದಾರೆ.