ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್
ಇಂದು ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಿದ್ದು, ಅವರನ್ನು ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರತ್ಯೇಕವಾಗಿ ಭೇಟಿ ಮಾಡುತ್ತಿದ್ದಾರೆ. ಇದರ ನಡುವೆ ಡಿಕೆಶಿ ಶಾಸಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ. ತಮ್ಮ ಪರ ನಿಲ್ಲುವಂತೆ ಶಾಸಕರಿಗೆ ಮನವಿ ಮಾಡುತ್ತಿದ್ದ ಸಹಿ ಪಡೆಯುತ್ತಿದ್ದಾರೆ. ಶಾಸಕರ ಬೆಂಬಲ ತಮಗಿದೆ ಎಂದು ಸಹಿ ಮೂಲಕ ಹೈಕಮಾಂಡ್ ಗೆ ಸಂದೇಶ ರವಾನಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ನಿನ್ನೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಮತ್ತು ವೀರೇಂದ್ರ ಪಪ್ಪಿಯವರನ್ನು ಭೇಟಿ ಮಾಡಿದ್ದರು ಎನ್ನಲಾಗುತ್ತಿದೆ.