ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿ ಗೆದ್ದಿದ್ದೇನೆ. ಗೆಲುವಿನ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಮುನ್ನ ಅವರ ಆಶೀರ್ವಾದ ಪಡೆದಿದ್ದೆ. ಈಗ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆ ಅಂತ ಕೈ ಪಡೆಯ ಏಕೈಕ ಸಂಸದ ಹೇಳಿದ್ದಾರೆ.
ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಯಾವ ಆಧಾರದ ಮೇಲೆ ಸೋಲಾಗಿದೆ ಎನ್ನುವುದನ್ನು ತಿಳಿಯಬೇಕಿದೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬರ ಸಮಸ್ಯೆ ಸೇರಿದಂತೆ ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ
ಮೈತ್ರಿನಾಯಕರು ಯಾರೂ ಕಿತ್ತಾಡುತ್ತಿಲ್ಲ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಅಂತ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸಿದ್ದರಾಮಯ್ಯ - ಕುಮಾರಸ್ವಾಮಿ ನಡುವೆ ಮನಸ್ತಾಪ ಇಲ್ಲ. ಮಾಜಿ ಮುಖ್ಯಮಂತ್ರಿ, ಹಾಲಿ ಮುಖ್ಯಮಂತ್ರಿ ಇಬ್ಬರೂ ಒಗ್ಗಟ್ಟಾಗುತ್ತಾರೆ. ಸಿಎಂ ಬದಲಾವಣೆ ವಿಚಾರವೇ ಇಲ್ಲ ಎಂದರು.
ಹೆಚ್.ಡಿ. ಕುಮಾರಸ್ಚಾಮಿ ಅವರೇ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ. ಅವರಿಗೆ ಎಲ್ಲರ ಬೆಂಬಲವಿದೆ ಅಂತ ದೇವೇಗೌಡರನ್ನು ಭೇಟಿ ಮಾಡಿ ಬಳಿಕ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಊರಲ್ಲೇ ಇಲ್ಲ ಅವರ ಹೆಸರನ್ನು ಸಿಎಂ ರೇಸ್ ನಲ್ಲಿ ಏಕೆ ಎಳೆದು ತರ್ತೀರಾ ಅಂತ ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ರು.