ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡ್ತಿರುವ ವಿಷಯವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಸತೀಶ್ ಜಾರಕಿಹೊಳಿ ಯಾವುದೋ ಪುಸ್ತಕದಲ್ಲಿದೆ ಅಂತ ಹೇಳ್ತಿದ್ದಾರೆ.ಯಾವ ಪುಸ್ತಕದಲ್ಲಿದೆ ನಂಗಂತೂ ಗೊತ್ತಿಲ್ಲ.ಇದನ್ನು ಪಕ್ಷದ ಅಧ್ಯಕ್ಷನಾಗಿ ಖಂಡಿಸುತ್ತೇನೆ.ಈಗಾಗಲೇ ಅವರ ಹೇಳಿಕೆಯನ್ನು ನಾವು ಸಮರ್ಥಿಸೋದಿಲ್ಲ ಅಂತ ಹೇಳಿಯಾಗಿದೆ.ಈಗಲೂ ಅವರು ಮತ್ತೆ ಅದನ್ನೇ ಸಮರ್ಥಿಸಿಕೊಳ್ತಿದ್ದರೆ ಗಮನಿಸಿ ಮಾತನಾಡ್ತೇನೆ ಎಂದು ಹೇಳಿದರು.