ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು ಹಮ್ಮಿಕೊಂಡಿರುವ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಚಿನ್ನದ ಬೆಲೆ ಮತ್ತು ಇತರೆ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಚಿನ್ನದ ಬೆಲೆಯನ್ನು ಏರಿಕೆ ಮಾಡಿದೆ. ಕಳೆದ 11 ವರ್ಷಗಳಿಂದ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಿದೆ. ಗ್ರಾಮ್ ಗೆ 40 ಸಾವಿರ ಇದ್ದ ಚಿನ್ನ ಈಗ 90 ಸಾವಿರ ಗಡಿ ದಾಟಿದೆ ಎಂದಿದ್ದಾರೆ.
10 ಸಾವಿರ ರೂ. ಇದ್ದ ಮೊಬೈಲ್ ಬೆಲೆ ಈಗ 30 ಸಾವಿರ ರೂ. ಆಗಿದೆ. ಸಿಲಿಂಡರ್ ಬೆಲೆ ಹೆಚ್ಚಾಗಿದೆ. 268 ರೂ. ಇದ್ದ ಸಿಮೆಂಟ್ ಬೆಲೆ ಈಗ 460 ರೂ. ಆಗಿದೆ. ಇದಕ್ಕಗಿಯೇ ನಾವು ಇಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸಿಲಿಂಡರ್ ಗಳಿಗೆ ಹಾರ ಹಾಕಿ ಸಾಂಕೇತಿಕವಾಗಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್ ನ ಬಹುತೇಕ ನಾಯಕರು ಉಪಸ್ಥಿತರಿದ್ದರು.